ಬೆಂಗಳೂರು: ಸದ್ಯದರಲ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಜೆಡಿಎಸ್ ನಾಯಕ ಹಾಗೂ ದೇವನಹಳ್ಳಿ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮತ್ತು ಇತರ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿರುವ ಜನಹಿತ ಬಯಸುವ ಕೆಲವು ನಮ್ಮ ಸಂಪರ್ಕದಲ್ಲಿದ್ದಾರೆ. ಬರುವ ದಿನಗಳಲ್ಲಿ ವಿವಿಧ ಜಿಲ್ಲೆಗಳ ಬೇರೆ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರಲಿದ್ದಾರೆ. ಎಲ್ಲ ಜಿಲ್ಲೆಗಳಲ್ಲೂ ಹಲವು ನಾಯಕರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ರಾಜ್ಯದಲ್ಲಿ ಜನಪರ ಸರ್ಕಾರ ಹಾಗೂ ಕೇಂದ್ರದಲ್ಲಿ ಉತ್ತಮ ಆಡಳಿತದ ಸರ್ಕಾರ ಇದೆ. ಸರ್ವಸಮುದಾಯಗಳಿಗೆ ನ್ಯಾಯ ಒದಗಿಸುವ ಧಾರದ ಮೇಲೆ ಕೆಲಸ ಕಾರ್ಯಗಳು ನಡೆಯಲಿವೆ. ಕಾಂಗ್ರೆಸ್ ನಾಯಕರು ಈಗಾಗಲೇ ಅಧಿಕಾರಕ್ಕೆ ಬಂದಂತೆ ಪೋಸ್ ಕೊಡುತ್ತಿದ್ದಾರೆ. ಆದರೆ ಅವರ ದುರಾಡಳಿತ ಹಾಗೂ ಸರ್ವಾಧಿಕಾರಿ ಧೋರಣೆಗಳನ್ನು ರಾಜ್ಯದ ಜನತೆ ಎಂದೂ ಕೂಡ ಒಪ್ಪೋದಿಲ್ಲ ಎಂದು ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
PublicNext
02/03/2022 07:31 am