ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

300 ಸ್ಥಾನ ಗೆದ್ದು ಹೊಸ ದಾಖಲೆ ನಿರ್ಮಿಸುತ್ತೇವೆ: ಯೋಗಿ ಆದಿತ್ಯನಾಥ್ ವಿಶ್ವಾಸ

ಗೋರಖಪುರ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಸುಮಾರು 300 ಕ್ಕೂ ಹೆಚ್ಚು ಸ್ಥಾನ ಗೆದ್ದು ದಾಖಲೆ ನಿರ್ಮಿಸಲಿದ್ದೇವೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಪ್ರದೇಶದ ಗೋರಖಪುರದ ಮತಗಟ್ಟೆಯಲ್ಲಿ ಮತ ಚಲಾಯಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದುವರೆಗೆ ನಮ್ಮ ಸರ್ಕಾರ ಜನರಿಗಾಗಿ ಕೊಟ್ಟ ಯೋಜನೆಗಳು ನಮ್ಮ ಕೈ ಹಿಡಿಯುತ್ತವೆ. ಜನಸಾಮಾನ್ಯರ ಆಶೋತ್ತರಗಳಿಗೆ ತಕ್ಕಂತೆ ನಾವು ಕೆಲಸ ಮಾಡಿದ್ದೇವೆ. ಇದುವರೆಗೆ ನಡೆದ ಐದು ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸುಕರಾಗಿ ಮತ ಚಲಾಯಿಸಿದ್ದಾರೆ. ಈ ಬಾರಿಯೂ ನಾವು ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

03/03/2022 02:05 pm

Cinque Terre

88.3 K

Cinque Terre

39

ಸಂಬಂಧಿತ ಸುದ್ದಿ