ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹರ್ಷ ಕೊಂದವರ ವಿರುದ್ಧ ಕೋಕಾ ಅಡಿ ಪ್ರಕರಣ ದಾಖಲಿಸಿ, ಗಲ್ಲಿಗೇರಿಸಿ: ಪ್ರಮೋದ್ ಮುತಾಲಿಕ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದು ಹಾಕಿದ ಹಂತಕರಿಗೆ ಕೋಕಾ ಕಾಯ್ದೆ ಜಾರಿಗೊಳಿಸಿ, ಗಲ್ಲಿಗೇರಿಸಬೇಕೆಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು‌.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಮಾಡಿದವರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೆ ಆರೋಪಿಗಳಿಗೆ ಜಾಮೀನು ಸಿಕ್ಕಿಲ್ಲ. ಆದ್ರೆ ಹರ್ಷ ಹಂತಕರ ವಿರುದ್ಧ ಕೇವಲ ಮರ್ಡರ್ ಕೇಸ್ ದಾಖಲಿಸಲಾಗಿದೆ. ಸ್ವಲ್ಪ ದಿನಗಳ ಬಳಿಕ ಜಾಮೀನಿನ ಮೇಲೆ ಹೊರಬಂದು ಓಡಾಡುತ್ತಾರೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇನೆ ಎಂದು ತಿಳಿಸಿದರು‌.

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಹರ್ಷ ಕೊಂದ ಹಂತಕರಿಗೆ ಒಂದು ವರ್ಷದಲ್ಲಿ ಶಿಕ್ಷೆಯಾಗಬೇಕು. ವರ್ಷದೊಳಗೆ ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿ ವಾದ, ಪ್ರತಿವಾದ ಮುಗಿದು ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

Edited By : Shivu K
PublicNext

PublicNext

03/03/2022 05:20 pm

Cinque Terre

42.27 K

Cinque Terre

6

ಸಂಬಂಧಿತ ಸುದ್ದಿ