ರಾಮನಗರ: ರಷ್ಯಾ- ಉಕ್ರೇನ್ ನಡುವೆ ಯುದ್ಧ ಭೀತಿ ಮೊದಲಿನಿಂದಲೂ ಇತ್ತು. ಅದನ್ನು ದೇಶದ ಜನರಿಗೆ ನೆನಪಿಸಿಕೊಡುತ್ತೇನೆ. ಯಾವುದೇ ಮಾಹಿತಿ ಇಲ್ಲದೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ತಡರಾತ್ರಿ 3 ಗಂಟೆಗೆ ಭೇಟಿ ಮಾಡಿದ್ದರು. ಇದರ ಉದ್ದೇಶ ಏನೆಂದು ಬಹಿರಂಗಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ನವೀನ್ ಶೇ. 97 ಅಂಕ ಗಳಿಸಿದ್ದರೂ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಿಫಲರಾಗಿ ಉಕ್ರೇನ್‌ಗೆ ಹೋಗಿ ಸಾವನ್ನಪ್ಪಿದ್ದಾರೆ. ಇದರಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಮಟ್ಟದ ನೀಟ್ ಪ್ರವೇಶ ಪರೀಕ್ಷೆ ಬಗ್ಗೆ ಅಸಮಾಧಾನ ಭುಗಿಲೆದ್ದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
PublicNext
04/03/2022 04:39 pm