ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೀನ್ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನ ನಡೆದಿದೆ: ಸಿಎಂ ಭರವಸೆ

ಹಾವೇರಿ: ಶೆಲ್ ಬಾಂಬ್ ಪರಿಣಾಮ ನವೀನ ಸಾವನ್ನಪ್ಪಿದ್ದಾನೆ‌. ವಿದ್ಯಾರ್ಜನೆಗೆ ತೆರಳಿದ್ದ ನವೀನಗೆ ಈ ರೀತಿ ಆಗುತ್ತದೆ ಅಂತಾ ಯಾರೂ ಊಹಿಸಿರಲಿಲ್ಲ. ಶಬ್ಧಗಳಲ್ಲಿ ಹೇಳಲು ಸಾಧ್ಯವಿಲ್ಲ. ನವೀನ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವ ಪ್ರಯತ್ನ ನಡೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಚಳಗೇರಿ ಗ್ರಾಮದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ. ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಸುತ್ತಲೂ ಬಾಂಬಿಂಗ್ ಅಗ್ತಿದೆ. ಹೀಗಾಗಿ ತರಲು ಆಗುತ್ತಿಲ್ಲ. ಇವತ್ತು ಯುದ್ದ ವಿರಾಮ ಆಗಿದೆ. ಆದಷ್ಟು ಬೇಗ ಪಾರ್ಥಿವ ಶರೀರವನ್ನು ತರುವ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂದರು.

ಯುದ್ಧ ನಿಲ್ಲಲಿ ಅಂತಾ ವಿನಂತಿ ಮಾಡಿದ್ದೇವೆ.ಕೆಲವರು ನಡೆದುಕೊಂಡು ಬಂದಿದ್ದಾರೆ. ಕೆಲವರು ಬಂಕರ್ ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ ಹತ್ತು ಜನರು ಹೋಗಿದ್ದರು. ಐವರು ಬಂದಿದ್ದಾರೆ, ಉಳಿದ ಐವರನ್ನು ಕರೆತರುವ ಪ್ರಯತ್ನ ನಡೆದಿದ್ದು,‌ ಇಪ್ಪತ್ತೈದು ಲಕ್ಷ ರೂಪಾಯಿ ಸರಕಾರದಿಂದ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದರು.

Edited By : Nagesh Gaonkar
PublicNext

PublicNext

05/03/2022 09:58 pm

Cinque Terre

51.29 K

Cinque Terre

0

ಸಂಬಂಧಿತ ಸುದ್ದಿ