ಬೆಂಗಳೂರು: ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದ್ದು, ವಿದ್ಯಾಭ್ಯಾಸಕ್ಕೆ ಹೋದ ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳುತ್ತಿದ್ದಾರೆ. ಹೀಗೆ ಯುದ್ಧ ಪೀಡಿತ ಉಕ್ರೇನ್ ನಿಂದ ವಾಪಸ್ ಆದ ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲೇ ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಆಗ್ರಹಿಸಿದ್ದಾರೆ.
ದೇಶದಲ್ಲಿ ವೈದ್ಯಕೀಯ ಶಿಕ್ಷಣ ಬಹಳ ದುಬಾರಿಯಾಗಿದೆ, ಹಾಗಾಗಿ ವಿದ್ಯಾರ್ಥಿಗಳು ಬೇರೆ ದೇಶಗಳಿಗೆ ಹೋಗಿದ್ದಾರೆ. ಸದ್ಯ ಶಿಕ್ಷಣ ಮುಗಿಸಿ ಟ್ರೈನಿಂಗ್ ಗೆ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಆದರೆ, ವಿದ್ಯಾಭ್ಯಾಸ ನಡೆಸುತ್ತಿರುವವರ ಭವಿಷ್ಯ ಹೇಗೆ ? ಈ ಬಗ್ಗೆ ರಾಜ್ಯ ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಹೇಳಬೇಕು.
ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಇಲ್ಲೇ ಉಚಿತವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡಿ. ಸಿಂಪತಿ ತೋರಿಸುವುದು ಬೇಡ. ಮಕ್ಕಳಿಗೆ ಉಚಿತ ಶಿಕ್ಷಣ ಕೊಡಬೇಕು ಎಂದರು ಒತ್ತಾಯಿಸಿದ್ದಾರೆ.
PublicNext
07/03/2022 03:20 pm