ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಿ: ಅಕಾಲಿ ದಳ ನಾಯಕ ಸುಖ್ಬೀರ್ ಸಿಂಗ್ ಒತ್ತಾಯ

ಅಮೃತ್‌ಸರ: ಪಂಚರಾಜ್ಯ ಚುನಾವಣೆಗಳ ಮತದಾನದ ಪ್ರಕ್ರಿಯೆ ಮುಗಿದಿದ್ದೇ ತಡ.. ಹಲವಾರು ಸಂಸ್ಥೆಗಳು ನಡೆಸಿದ ಚುನಾವಣಾ ಸಮೀಕ್ಷೆಗಳು ಹೊರಬಿದ್ದಿವೆ. ಈ ಸಮೀಕ್ಷೆಗಳು ಆಯಾ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ? ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಸಿಗಬಹುದೆಂಬ ಸಂಭವನೀಯ ಫಲಿತಾಂಶ ನೀಡಿದೆ. ಆದ್ರೆ ಈ ಸಮೀಕ್ಷೆಗಳನ್ನು ಶಿರೋಮಣಿ ಅಕಾಲಿ ದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ವಿರೋಧಿಸಿದ್ದಾರೆ. ಈ ಸಮೀಕ್ಷೆಗಳನ್ನೇ ನಿಷೇಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಅಮೃತಸರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಬಾದಲ್, ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಮತದಾರರಿಂದ ಅಭಿಪ್ರಾಯ ಸಂಗ್ರಹ ಹಾಗೂ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ದೊರೆಯಲಿದೆ ಎಂದು ಬಾದಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

09/03/2022 04:43 pm

Cinque Terre

24.13 K

Cinque Terre

4

ಸಂಬಂಧಿತ ಸುದ್ದಿ