ಬೆಂಗಳೂರು : ಹೊಸ ಕೈಗಾರಿಕಾ ನೀತಿ 2020-25 ರನ್ವಯ ಕರ್ನಾಟಕದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು ಎಂದು ರಾಜ್ಯ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಎಚ್ಚರಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಕೈಗಾರಿಕಾ ನೀತಿ – 2020 – 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದ್ದಾರೆ.
PublicNext
09/03/2022 06:56 pm