ಬಾಗಲಕೋಟೆ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಮತ್ತೊಮ್ಮೆ ಸಿಎಂ ಆಗೋದು ನಿಶ್ಚಿತ. ಅವರು ರಾಜಕೀಯದಲ್ಲಿ ಬೆಳೆದು ಹಿಂದೂ ರಾಷ್ಟ್ರ ಮಾಡಿಯೇ ಮಾಡ್ತಾರೆ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉತ್ತರ ಪ್ರದೇಶ ಸೇರಿ ಐದು ರಾಜ್ಯಗಳಲ್ಲಿ ನಡೆದ ಚುನಾವಣಾ ಫಲಿತಾಂಶ ನಾಳೆ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ. ಅಲ್ಲಿನ ಜನ ಮುಲಾಯಂ ಸಿಂಗ್ ಅವರ ಆಡಳಿತವನ್ನು ನೋಡಿದ್ದಾರೆ. ಬಿಎಸ್ಪಿಯ ಮಾಯಾವತಿ ಅಧಿಕಾರವನ್ನೂ ನೋಡಿದ್ದಾರೆ. ಕಾಂಗ್ರೆಸ್ ಆಡಳಿತವನ್ನೂ ಕಂಡಿದ್ದಾರೆ. ಮುಂದಿನ 25 ವರ್ಷದಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶವನ್ನು ಹಿಂದೂ ರಾಜ್ಯವನ್ನಾಗಿ ಮಾಡ್ತಾರೆ ಎಂಬ ನಿರೀಕ್ಷೆ ನನಗಿದೆ. ಈ ಬಾರಿಯ ಚುನಾವಣೆಯ ಫಲಿತಾಂಶ ಬಂದ ನಂತರ ಯೋಗಿ ಆದಿತ್ಯನಾಥ್ ಅವರು ಮತ್ತೊಮ್ಮೆ ಸಿಎಂ ಆಗೋದು ನೂರಕ್ಕೆ ನೂರು ನಿಶ್ಚಿತ ಎಂದು ಮುತಾಲಿಕ್ ಹೇಳಿದ್ದಾರೆ.
PublicNext
09/03/2022 08:39 pm