ಚಂಡೀಗಡ: ಆಮ್ ಆದ್ಮಿ ಪಕ್ಷ ದೆಹಲಿಯಾಚೆಗೆ ತನ್ನ ಅಸ್ತಿತ್ವವನ್ನು ವಿಸ್ತರಿಸಿಕೊಳ್ಳುತ್ತಿದೆ. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬದಿಗೊತ್ತಿ ಅಧಿಕಾರದ ಗದ್ದುಗೆ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಪಂಜಾಬ್‌ನ ಎಎಪಿಯ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ನಿವಾಸದ ಎದುರು ಸಂಭ್ರಮಾಚರಣೆ ಜೋರಾಗಿದೆ.
ಪಂಜಾಬ್‌ನಲ್ಲಿ ಸರ್ಕಾರ ರಚಿಸಲು ಇರುವ ಮ್ಯಾಜಿಕ್ ನಂಬರ್ 59 ಅನ್ನು ಎಎಪಿ ದಾಟಿದೆ. ಸದ್ಯದ ಬೆಳವಣಿಗೆ ಎಎಪಿ ಪಂಜಾಬ್‌ನಲ್ಲಿ 90 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪಾಟಿಯಾಲ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಅಜಿತ್ ಪಾಲ್ ಸಿಂಗ್ ಕೊಹ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
PublicNext
10/03/2022 12:52 pm