ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಧು ರಾಜೀನಾಮೆ- ಆಪ್‌ಗೆ ಅಭಿನಂದನೆ

ಚಂಡೀಗಡ: ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದ್ದು, ನೈತಿಕ ಹೊಣೆಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಧು ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ.

ಪಂಜಾಬ್ ವಿಧಾನ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವಂತೆಯೇ ನವಜೋತ್ ಸಿಂಗ್ ಸಿಧು ಅವರು "ಜನರ ಧ್ವನಿ ದೇವರ ಧ್ವನಿಯಾಗಿದೆ. ಪಂಜಾಬ್ ಜನತೆಯ ಆದೇಶವನ್ನು ನಮ್ರತೆಯಿಂದ ಸ್ವೀಕರಿಸಿ. ಆಪ್‌ಗೆ ಅಭಿನಂದನೆಗಳು" ಎಂದು ಟ್ವೀಟ್ ಮಾಡಿದ್ದಾರೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 91 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 17, ಎಸ್‌ಎಡಿ 6, ಬಿಜೆಪಿ 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

Edited By : Vijay Kumar
PublicNext

PublicNext

10/03/2022 01:11 pm

Cinque Terre

45.2 K

Cinque Terre

4

ಸಂಬಂಧಿತ ಸುದ್ದಿ