ಬೆಂಗಳೂರು: ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯು ನಾಲ್ಕು ರಾಜ್ಯದಲ್ಲಿ ಗೆಲುವಿನ ನಿರೀಕ್ಷೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಬಿಜೆಪಿ ಮತದಾರರು ಸೈಲೆಂಟ್ ಆಗಿ ಉತ್ತರ ಕೊಟ್ಟಿದ್ದಾರೆ ಎಂದಿದ್ದಾರೆ. ಇಂದು ಪಂಚರಾಜ್ಯಗಳ ಮತಎಣಿಕೆ ನಡೆಯುತ್ತಿದ್ದು, ಮಣಿಪುರ, ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಈ ಹಿನ್ನೆಲೆ ಕಮಲದ ಸದಸ್ಯರು ಗೆಲುವಿನ ನಗೆ ಬೀರಿದ್ದಾರೆ.
PublicNext
10/03/2022 02:06 pm