ಡೆಹ್ರಾಡೂನ್: ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಲಾಲ್ಕುವಾ ಕ್ಷೇತ್ರದಿಂದ ಬಿಜೆಪಿಯ ಮೋಹನ್ ಸಿಂಗ್ ಬಿಶ್ತ್ ವಿರುದ್ಧ ಸೋಲು ಕಂಡಿದ್ದಾರೆ. ರಾವತ್ ಅವರು ಸುಮಾರು 14,000 ಮತಗಳ ಅಂತರದಿಂದ ಪರಾಜಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಫೆಬ್ರವರಿ 14ರಂದು ಮತದಾನ ಪ್ರಕ್ರಿಯೆ ಮುಗಿದ ನಂತರ ಹರೀಶ್ ರಾವತ್ ಅವರು ತಮ್ಮನ್ನು ತಾವು ಸಿಎಂ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದರು. 2017ರ ವಿಧಾನಸಭಾ ಚುನಾವಣೆಯಲ್ಲಿ ಕಿಚ್ಚಾ ವಿಧಾನಸಭಾ ಕ್ಷೇತ್ರ ಮತ್ತು ಹರಿದ್ವಾರ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು, ಎರಡೂ ಕ್ಷೇತ್ರಗಳಲ್ಲೂ ಸೋಲನ್ನು ಅನುಭವಿಸಿದ್ದರು. ಸದ್ಯದ ಮಾಹಿತಿ ಪ್ರಕಾರ, 2022ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
PublicNext
10/03/2022 02:40 pm