ಲಕ್ನೋ : ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಹೊರ ಬಿದ್ದಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಶೇ. 40 ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮಣೆ ಹಾಕಿಲ್ಲ. ನಟಿ, ಮಾಡೆಲ್ ಅರ್ಚನಾ ಗೌತಮ್ ಕೂಡಾ ಸೋಲು ಕಂಡಿದ್ದಾರೆ. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್ ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅರ್ಚನಾ ಸ್ಪರ್ಧಿಸಿದ್ದರು.
ಮಾಡೆಲ್ ಕಮ್ ರಾಜಕಾರಣಿ ಅರ್ಚನಾ ಗೌತಮ್ 1133 ಮತಗಳನ್ನು ಪಡೆದುಕೊಂಡು ಹೀನಾಯ ಸೋಲನ್ನು ಅನುಭವಿಸಿದ್ದಾರೆ.
PublicNext
10/03/2022 08:16 pm