ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲೋಕಸಭಾ ಚುನಾವಣೆ ಭವಿಷ್ಯ ನುಡಿದ ಪ್ರಧಾನಿ ಮೋದಿ

ಪಂಚರಾಜ್ಯಗಳ ಚುನಾವಣೆಯಲ್ಲಿ ಪಂಜಾಬ ಹೊರತು ಪಡಿಸಿ ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ ಮತ್ತು ಗೋವಾ ಈ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಯ ಬೃಹತ್ ವಿಜಯದ ಬೆನ್ನಲ್ಲೆ ಪ್ರಧಾನಿ ಮೋದಿ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.

ನವದೆಹಲಿಯ ಬಿಜೆಪಿ ಹೆಡ್ ಕ್ವಾಟ್ರಸ್ ನಲ್ಲಿ ಮಾತನಾಡಿದ ಅವರು, 2022 ರ ಈ ಚುನಾವಣಾ ಫಲಿತಾಂಶವೂ 2024 ರ ಸಾರ್ವತ್ರಿಕ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದರು.

ಈ ಚುನಾವಣೆಗಳಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ನಮಗೆ ಆಶೀರ್ವಾದ ಮಾಡಿದ್ದಾರೆ. ಮಹಿಳಾ ಮತದಾರರು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ನಾವು ಅದ್ಭುತವಾಗಿ ಗೆದ್ದಿದ್ದೇವೆ. ಈ ವಿಜಯದಲ್ಲಿ ನಮ್ಮ ನಾರಿ ಶಕ್ತಿ ನಮ್ಮ ಪಾಲುದಾರರಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿರುವುದು ಹೆಮ್ಮೆಯ ವಿಷಯ ಎಂದರು.

ಪಂಜಾಬ್ ನಲ್ಲಿ ಬಿಜೆಪಿ ಶಕ್ತಿಯಾಗಿ ಹೊರಹೊಮ್ಮುತ್ತಿರುವುದನ್ನು ನಾನು ಈಗಾಗಲೇ ನೋಡುತ್ತಿದ್ದೇನೆ. ನಮ್ಮ ಪಂಜಾಬ್ ಕಾರ್ಯಕರ್ತರು ಕಷ್ಟದ ಸಂದರ್ಭಗಳ ನಡುವೆಯೂ ಪಂಜಾಬ್ ನಲ್ಲಿ ತಮ್ಮ ಕೆಲಸದಿಂದ ಪಕ್ಷ ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

Edited By : Nirmala Aralikatti
PublicNext

PublicNext

10/03/2022 09:40 pm

Cinque Terre

75.44 K

Cinque Terre

26

ಸಂಬಂಧಿತ ಸುದ್ದಿ