ಬೆಂಗಳೂರು : ಪಂಜಾಬ,ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಈ ಫಲಿತಾಂಶ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಪಂಚಾಬ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯದತ್ತ ಮುನ್ನುಗ್ಗುತ್ತಿದೆ. ಗೋವಾದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಎಲ್ಲೇಡೆ ಕಮಲ ಅರಳಿದ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ರಾಜ್ಯದಲ್ಲಿ ಒಬ್ಬ ಸಿದ್ದು (ಸಿದ್ದರಾಮಯ್ಯ) ಮತ್ತು ಪಂಜಾಬ್ ನಲ್ಲಿ ಒಬ್ಬ ಸಿದ್ದು ಸಾಕು ಕಾಂಗ್ರೆಸ್ಸಿಗೆ ಇತಿಶ್ರೀ ಹಾಡಲು ಎಂದು ವ್ಯಂಗ್ಯವಾಡಿದ್ದಾರೆ.
PublicNext
10/03/2022 10:02 pm