ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾವು ಭವಿಷ್ಯದಲ್ಲಿ ಮತ್ತೊಮ್ಮೆ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ಪಿ ನಾಯಕಿ ಮಾಯಾವತಿ

ಲಕ್ನೋ: ಉತ್ತರ ಪ್ರದೇಶದ ಚುನಾವಣೆ ನಮ್ಮ ನಿರೀಕ್ಷೆಗೆ ವಿರುದ್ಧವಾಗಿವೆ. ಈ ಕಾರಣಕ್ಕಾಗಿ ನಾವು ಎದೆಗುಂದಬಾರದು. ಭವಿಷ್ಯದಲ್ಲಿ ನಾವು ಮತ್ತೊಮ್ಮೆ ಗೆದ್ದೇ ಗೆಲ್ಲುತ್ತೇವೆ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಫಲಿತಾಂಶ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಇದು ನಮಗೊಂದು ಪಾಠವಾಗಿದೆ. ನಮ್ಮ ಸೋಲಿನಿಂದ ನಾವು ಪಾಠ ಕಲಿತಿದ್ದೇವೆ. ಆದ್ರೆ ನಾವು ಎದೆಗುಂದಿಲ್ಲ. ಇದು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ. ನಮ್ಮ ಪಕ್ಷದ ಚಳವಳಿಯನ್ನು ಮತ್ತೆ ಆರಂಭಿಸಲಿದ್ದೇವೆ. ಆ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತೇವೆ. 2017ಕ್ಕೂ ಮುನ್ನ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶಗಳು ಸಿಕ್ಕಿರಲಿಲ್ಲ. ಇಂದು ಕಾಂಗ್ರೆಸ್ ಕೂಡ ಬಿಜೆಪಿಯಂತೆಯೇ ಅದೇ ಹಂತಕ್ಕೆ ಹೋಗುತ್ತಿದೆ. ಉತ್ತರಪ್ರದೇಶದ ಚುನಾವಣಾ ಫಲಿತಾಂಶವು ನಮ್ಮ ಪ್ರಯತ್ನಗಳನ್ನು ಮುಂದುವರಿಸಲು ಪಾಠವಾಗಿದೆ. ಬಿಎಸ್‍ಪಿ ವಿರುದ್ಧದ ನಕಾರಾತ್ಮಕ ಪ್ರಚಾರಗಳು ಸಾರ್ವಜನಿಕರನ್ನು ದಾರಿತಪ್ಪಿಸುವಲ್ಲಿ ಯಶಸ್ವಿಯಾಗಿವೆ ಎಂದು ಮಾಯಾವತಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

11/03/2022 04:37 pm

Cinque Terre

45.89 K

Cinque Terre

16

ಸಂಬಂಧಿತ ಸುದ್ದಿ