ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ನೈತಿಕ ಹೊಣೆ' ಎಂಬ ಶಬ್ದಕ್ಕೆ ಕಾಂಗ್ರೆಸ್‌ನಲ್ಲಿ ಅರ್ಥವೇ ಇಲ್ಲ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಪಂಚರಾಜ್ಯ ಚುನಾವಣೆಗಳಲ್ಲಿ ಸೋಲಿನ ಕಹಿ ಅನುಭವಿಸಿ ಹೈರಾಣಾಗಿರುವ ಕಾಂಗ್ರೆಸ್ ಮೇಲೆ ಬಿಜೆಪಿ ನಿರಂತರ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, 'ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ವಿಸರ್ಜಿಸಿ ಎಂದು ಗಾಂಧೀಜಿ ಪ್ರತಿಪಾದಿಸಿದ್ದರು. ಆದರೆ ನಕಲಿ ಗಾಂಧಿಗಳು, ನಕಲಿ ಕಾಂಗ್ರೆಸ್ಸಿಗರು ಗಾಂಧೀಜಿ ಮಾತಿಗೆ ಬೆಲೆ ಕೊಡಲಿಲ್ಲ' ಎಂದಿದೆ.

ಇದೇ ಟ್ವೀಟ್‌ನಲ್ಲಿ ಮುಂದೆ, 'ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂಬಂತೆ ಈಗ ಜನರೇ‌ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿದ್ದಾರೆ. ಇನ್ನಾದರೂ ನಕಲಿ ಗಾಂಧಿ ಕುಟುಂಬ ಪೂಜಕರು ಬುದ್ದಿ ಕಲಿಯಬಹುದೇ?' ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ. 'ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಒಂದಷ್ಟು ಜನ ಸೋನಿಯಾ ಹಾಗೂ ಪ್ರಿಯಾಂಕಾ ಗಾಂಧಿ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನೈತಿಕ ಹೊಣೆ ಎಂಬ ಶಬ್ದಕ್ಕೆ ಅರ್ಥವಿದೆಯೇ? ಅವರವರೇ, ಅವರ ಕುಟುಂಬದೊಳಗೆ ಜವಾಬ್ದಾರಿ ಹಂಚಿಕೊಳ್ಳುವ ವಾಸ್ತವತೆಯಲ್ಲಿ ನಕಲಿ ಗಾಂಧಿಗಳು ರಾಜೀನಾಮೆ ನೀಡುವುದು ಹೇಗೆ ಸಾಧ್ಯ? ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದೆ.

Edited By : Nagaraj Tulugeri
PublicNext

PublicNext

13/03/2022 08:02 pm

Cinque Terre

97.63 K

Cinque Terre

17

ಸಂಬಂಧಿತ ಸುದ್ದಿ