ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಹುಲ್ ಗಾಂಧಿ ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗಲಿ: ಉನ್ನತ ಸಭೆಯಲ್ಲಿ ಒತ್ತಾಯ

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷಗಿರಿ ಬದಲಾವಣೆಗೆ ಚಟುವಟಿಕೆಗಳು ನಡೆಯುತ್ತಿವೆ.ಈ ಬಗ್ಗೆ ಇಂದು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ಹಮ್ಮಿಕೊಳ್ಳಲಾಗಿತ್ತು.

ಈ ನಡುವೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜೀನಾಮೆ ನೀಡುತ್ತಾರೆ ಎಂಬ ಬಗ್ಗೆ ವರದಿ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಇದೆಲ್ಲ ಸುಳ್ಳು ಎಂದಿದ್ದರು. ಇಂದು ನಡೆದ ಕಾಂಗ್ರೆಸ್ ವರ್ಕಿಂಗ್ ಕಮಿಟಿ(ಸಿಡಬ್ಲುಸಿ) ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

Edited By : Nagaraj Tulugeri
PublicNext

PublicNext

13/03/2022 11:08 pm

Cinque Terre

43.37 K

Cinque Terre

35

ಸಂಬಂಧಿತ ಸುದ್ದಿ