ಲಖನೌ: ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನವನ್ನೂ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಈ ಸೋಲಿನ ಹೊಣೆ ಹೊತ್ತ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ಘಟಕಗಳ ಮುಖ್ಯಸ್ಥರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ ನಂತರ ಲಲ್ಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 'ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಗೆಲ್ಲಿಸಲು ದುಡಿದಿದ್ದೇವೆ. ಆದ್ರೆ ಈ ಚುನಾವಣೆಯಲ್ಲಿ ನಾವು ಅನಿರೀಕ್ಷಿತ ಸೋಲನ್ನು ಎದುರಿಸಬೇಕಾಯಿತು. ಈ ಸೋಲಿನ ನೈತಿಕ ಹೊಣೆ ಹೊತ್ತು ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ' ಎಂದು ಲಲ್ಲು ಅವರು ತಿಳಿಸಿದ್ದಾರೆ.
PublicNext
16/03/2022 10:53 am