ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ ಆಯ್ಕೆಗಳನ್ನು ಭಾರತ ಹುಡುಕುತ್ತಿದೆ: ಹರ್ದೀಪ್ ಸಿಂಗ್ ಪುರಿ

ನವದೆಹಲಿ: ರಿಯಾಯಿತಿ ದರದಲ್ಲಿ ಭಾರತಕ್ಕೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ ಆಯ್ಕೆಗಳನ್ನು ಹುಡುಕಲಾಗುತ್ತಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. ​ಪಾಶ್ಚಿಮಾತ್ಯ ದೇಶಗಳು ರಷ್ಯಾ ವಿರುದ್ಧ ಹಲವು ನಿರ್ಬಂಧಗಳನ್ನು ಹೇರಿವೆ. ಈ ಹಿನ್ನೆಲೆಯಲ್ಲಿ ಆರ್ಥಿಕ, ವಾಣಿಜ್ಯ ಬಿಕ್ಕಟ್ಟು ಎದುರಿಸುತ್ತಿರುವ ರಷ್ಯಾ, ಭಾರತಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ನೀಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಈ ಬಗ್ಗೆ ಮಾತುಕತೆ ನಡೆಸುತ್ತಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

"ಪ್ರಸ್ತುತ ಆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಲ್ಲಿ ಎಷ್ಟು ತೈಲ ಲಭ್ಯವಿದೆ ಎಂಬುದು ಸೇರಿದಂತೆ ಹಲವಾರು ಸಮಸ್ಯೆಗಳಿವೆ" ಎಂದು ಪುರಿ ಅವರು ಸಂಸತ್ತಿಗೆ ತಿಳಿಸಿದ್ದಾರೆ. ವಿಮೆ, ಸರಕು ಸಾಗಣೆ ಮತ್ತು ಕಚ್ಚಾ ತೈಲಕ್ಕೆ ಹಣ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸರ್ಕಾರ ಚರ್ಚಿಸುತ್ತಿದೆ ಎಂದು ಪುರಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

16/03/2022 11:33 am

Cinque Terre

33.87 K

Cinque Terre

0