ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಭಗವಂತ್

ಪಂಬಾಬ್ : ಪಂಚರಾಜ್ಯಗಳ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದ ಪಂಜಾಬ್ ನಲ್ಲಿ ಅಭೂತಪೂರ್ವ ಜಯಗಳಿಸಿದ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್ ನ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸ್ವತಂತ್ರ್ಯ ಸೇನಾನಿ ಭಗತ್ ಸಿಂಗ್ ಅವರ ಗ್ರಾಮ ಪಂಜಾಬ್ ನ ಖಟ್ಕರ್ ಕಲಾನ್ ನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸಮ್ಮುಖದಲ್ಲಿ ಭಗವಂತ್ ಪ್ರಮಾಣ ವಚನ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ, ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿ ಅನೇಕರು ಶುಭಹಾರೈಸಿದ್ದಾರೆ.

Edited By : Nirmala Aralikatti
PublicNext

PublicNext

16/03/2022 01:51 pm

Cinque Terre

60.92 K

Cinque Terre

10

ಸಂಬಂಧಿತ ಸುದ್ದಿ