ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಸೇರಿಕೊಂಡ ನಟ ನಿರ್ದೇಶಕ ಎಸ್. ನಾರಾಯಣ್

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ದೇಶಕ ಹಾಗೂ ನಟ ಎಸ್. ನಾರಾಯಣ್ ಇಂದು (ಮಾರ್ಚ್ 16) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡ ಕಾಂಗ್ರೆಸ್ ಸೇರಿದ್ದಾರೆ. ಇಬ್ಬರಿಗೂ ಹೂಗುಚ್ಛ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ನಂತರ ಕಾರ್ಯಕ್ರಮದಲ್ಲಿ ಮಾತಾನಡಿದ ಎಸ್. ನಾರಾಯಣ್, ಕನ್ನಡ ಚಿತ್ರರಂಗದಲ್ಲಿ ಕಳೆದ ಮೂರು ವರ್ಷಗಳಿಂದ ಇದ್ದೇನೆ. ರಾಜ್‌ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿ ಹಲವು ಸ್ಟಾರ್ ನಟರ ಜೊತೆ ಕೆಲಸ ಮಾಡಿದ್ದೇನೆ. ನನಗೆ ಸಿನಿಮಾ ಎಲ್ಲವನ್ನೂ ಕೊಟ್ಟಿದೆ. ರಾಜಕೀಯ ಎಲ್ಲ ನಿಮಗ್ಯಾಕೆ ಎಂದು ಜನ ನನಗೆ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಮುಂದೆ ಉತ್ತರ ಸಿಗುತ್ತೆ. ಕಾಂಗ್ರೆಸ್‌ನ ಜಾತ್ಯಾತೀತ ಸಿದ್ಧಾಂತಗಲು ಇಷ್ಟವಾಗಿವೆ. ಹೀಗಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ . ಮುಂದಿನ ವಿಧಾನಸಭೇ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

16/03/2022 03:09 pm

Cinque Terre

31.51 K

Cinque Terre

33

ಸಂಬಂಧಿತ ಸುದ್ದಿ