ಲಖನೌ: ಸತತ ಎರಡನೇ ಅವಧಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಹೊಸದಾಗಿ ಚುನಾಯಿತ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭ ಮಾರ್ಚ್ 25 ರಂದು ಲಖನೌದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಯೋಗಿ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಉನ್ನತ ನಾಯಕರಿಗೂ ಸಮಾರಂಭಕ್ಕೆ ಆಹ್ವಾನ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
PublicNext
19/03/2022 07:20 am