ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಮಾಜಿ ಸಿಎಂ ದೇವೇಂದ್ರ ಫಡ್ನವೀಸ್

ನಾಗಪುರ: ಮಹಾರಾಷ್ಟ್ರದ ಮುಂದಿನ ವಿಧಾನಸಭೆ ಚುನನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತಿದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ನಾಗಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ಬಿಜೆಪಿ 40 ರಲ್ಲಿ 20 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ಮಹಾರಾಷ್ಟ್ರದಲ್ಲಿಯೂ ಇದೇ ರೀತಿ ಬದಲಾವಣೆಯ ಅಲೆ ಬೀಸಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿಗೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ರಾಜ್ಯದಲ್ಲಿ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ನಮ್ಮ ವಿರುದ್ಧ ಎಷ್ಟೇ ಕೇಸ್ ಹಾಕಿದರೂ ನಿಮ್ಮ ಭ್ರಷ್ಟಾಚಾರದ ವಿರುದ್ಧ ನಾವು ಮಾತನಾಡುವುದನ್ನು ನಿಲ್ಲಿಸುವುದಿಲ್ಲ ಎಂದು ಮಹಾ ವಿಕಾಸ್ ಅಘಾಡಿ (ಸಮ್ಮಿಶ್ರ) ಸರ್ಕಾರಕ್ಕೆ ಫಡ್ನವೀಸ್ ಎಚ್ಚರಿಕೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

19/03/2022 07:56 am

Cinque Terre

65.23 K

Cinque Terre

3