ಬೆಂಗಳೂರು: ಮಕ್ಕಳಿಗೆ ಕೇಸರಿ ಶಾಲು ಕೊಡ್ತೀರ, ದಿ ಕಾಶ್ಮೀರ್ ಫೈಲ್ ಚಿತ್ರ ನೋಡಿ ಅಂತೀರ, ದಲಿತರ ಹಣವನ್ನು ಯಾಕೆ ನುಂಗ್ತಿದ್ದೀರಾ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ಶಾಲಾ ಮಕ್ಕಳಿಗೆ ಕಿತಾಬ್ ಕೊಡಿ ಅಂದ್ರೆ ಬಿಜೆಪಿ ಸರ್ಕಾರ ಹಿಜಾಬ್ ವಿವಾದ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಖಾವೂಂಗಾ, ನಾ ಖಾನೇದೂಂಗ ಎಂದು ಹೇಳಿದ್ದರು. ಆದರೆ, ಈಗಿನ ಬಿಜೆಪಿ ಸರ್ಕಾರ ಮೈಭೀ ಖಾವೂಂಗಾ, ಸಬ್ ಕೋ ಖಿಲಾವೂಂಗಾ ಎನ್ನುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನೋಡಲು ಒಗ್ಗಟ್ಟಾಗಿ ಹೋಗುವ ಮಂತ್ರಿಗಳು ಮತ್ತು ಸರ್ಕಾರ ಒಗ್ಗಟ್ಟಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಶ್ಮೀರ್ ಫೈಲ್ಸ್ ಬಗ್ಗೆ ಸಾಕಷ್ಟು ಪ್ರಚಾರ ಮಾಡಿದ್ರು. ಬಿಜೆಪಿಯ ಟೂಲ್ ಕಿಟ್ ದಿ ಕಾಶ್ಮೀರ್ ಫೈಲ್ಸ್. ರಾಜ್ಯ ಸರ್ಕಾರ ಟ್ಯಾಕ್ಸ್ ಫ್ರೀ ಮಾಡಿತು. ಸ್ಪೀಕರ್ ಸಿನಿಮಾ ನೋಡಿ ಅಂದ್ರು. ಆದರೆ ನಾನು ಕೇಳೋದು ಇಷ್ಟೇ ಕಾಶ್ಮೀರ್ ಫೈಲ್ಸ್‌ಗೆ ಇವರು ಇಷ್ಟೊಂದು ಆಸಕ್ತಿ ನೀಡ್ತಾರೆ. ಆದರೆ ರಾಜ್ಯದ ಬಗ್ಗೆ ಇವರಿಗೆ ಆಸಕ್ತಿಯಿಲ್ಲ. ಕರ್ನಾಟಕ ಫೈಲ್ಸ್ ನೋಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
PublicNext
19/03/2022 11:02 pm