ದಾವಣಗೆರೆ:ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನನ್ನ ಕ್ಷೇತ್ರಕ್ಕೆ ಬಂದು ನಾನು ಇಲ್ಲಿಂದಲೇ ಸ್ಪರ್ಧಿಸುತ್ತೇನೆ ಅಂತ ಹೇಳಿದರೆ, ನಾನು ನನ್ನ ಕ್ಷೇತ್ರ ಬಿಟ್ಟು ಕೊಡಲು ಸಿದ್ದ ಅಂತಲೇ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಯಾರು ಎಲ್ಲಿಂದ ಸ್ಪರ್ಧಿಸಬೇಕು ಅನ್ನೋದನ್ನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಹಾಗೇನೆ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಈಗಲೇ ಯಾಕೆ ಆ ಮಾತು ಅನ್ನೋ ಅರ್ಥದಲ್ಲಿಯೇ ರೇಣುಕಾಚಾರ್ಯಕ ರಿಯಾಕ್ಟ್ ಮಾಡಿದ್ದಾರೆ.
ದಾವಣಗೆರೆಯ ಉತ್ತರ ವಿಧಾನಸಭಾ ಕ್ಷೇತ್ರದಿಂದಲೇ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸುತ್ತಾರೆಯೇ ಅಂತ ಕೇಳಿದ ಪ್ರಶ್ನೆಗೆ ಹೀಗೆ ರೇಣುಕಾಚಾರ್ಯ ಉತ್ತರ ಕೊಟ್ಟಿದ್ದಾರೆ.
PublicNext
21/03/2022 12:27 pm