ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರಾಖಂಡ್: ಚುನಾವಣೆಯಲ್ಲಿ ಸೋತರೂ ಪುಷ್ಕರ್​ಗೆ ಸಿಎಂ ಪಟ್ಟ

ಡೆಹ್ರಾಡೂನ್: ಉತ್ತರಾಖಂಡ್​ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಸೋಲು ಕಂಡಿದ್ದರೂ ಧಾಮಿ ಅವರಿಗೆ ಬಿಜೆಪಿ ಮುಖ್ಯಮಂತ್ರಿ ಪಟ್ಟ ನೀಡಿದೆ.

ರಾಜಧಾನಿ ಡೆಹ್ರಾಡೂನ್​ನಲ್ಲಿ ಇಂದು (ಸೋಮವಾರ) ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿತ್ತು. ಇದರಲ್ಲಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮುಖ್ಯಮಂತ್ರಿಯಾಗಿ ಧಾಮಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ.

ಪುಷ್ಕರ್ ಸಿಂಗ್​ ಧಾಮಿ ವಿಧಾನಸಭೆ ಚುನಾವಣೆಯಲ್ಲಿ ಖತೀಮಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಆದ್ದರಿಂದ ಹೊಸಬರಿಗೆ ಬಿಜೆಪಿ ಮಣೆ ಹಾಕಲಿದೆ ಎಂಬ ನಿರೀಕ್ಷೆ ಇತ್ತು. ಕೇಂದ್ರದ ವೀಕ್ಷಕರಾದ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಮತ್ತು ವಿದೇಶಾಂಗ ಖಾತೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಧಾಮಿ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವೆರಿಸಲು ತೀರ್ಮಾನಿಸಲಾಗಿದೆ.

Edited By : Vijay Kumar
PublicNext

PublicNext

21/03/2022 06:40 pm

Cinque Terre

53.84 K

Cinque Terre

1

ಸಂಬಂಧಿತ ಸುದ್ದಿ