ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋವಾ: ಎರಡನೇ ಅವಧಿಗೂ ಪ್ರಮೋದ್ ಸಾವಂತ್ ಸಿಎಂ- ಬಿಜೆಪಿಗೆ ಎಂಜಿಪಿ, ಪಕ್ಷೇತರರ ಬೆಂಬಲ

ಪಣಜಿ: ಗೋವಾದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಕೇಳಿಬರುತ್ತಿದ್ದ ಸಾಕಷ್ಟು ಊಹಾಪೋಹಗಳಿಗೆ ಬಿಜೆಪಿ ತೆರೆ ಎಳೆದಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಮೋದ್ ಸಾವಂತ್ ಅವರನ್ನು ಗೋವಾ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಸಾವಂತ್ ಅವರು ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಾಜಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸಹ ಅವರು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಗೋವಾದಲ್ಲಿ ಬಹುಮತ ಸಾಧಿಸಲು 21 ಸ್ಥಾನಗಳ ಅಗತ್ಯವಿದೆ. ಇದೀಗ ಬಿಜೆಪಿ ಎಂಜಿಪಿ ಪಕ್ಷದ ಇಬ್ಬರು ಮತ್ತು ಮೂವರು ಪಕ್ಷೇತರರ ಬೆಂಬಲ ಪಡೆದುಕೊಂಡಿದೆ. ಹೀಗಾಗಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದೆ.

Edited By : Vijay Kumar
PublicNext

PublicNext

21/03/2022 07:23 pm

Cinque Terre

32.86 K

Cinque Terre

4

ಸಂಬಂಧಿತ ಸುದ್ದಿ