ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಸದ ಲಾರಿಗೆ ಬಲಿಯಾದ ಬಾಲಕಿಯ ಸಾವಿಗೆ ಯಾರು ಹೊಣೆ?: ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿ ವಿಚಾರವಾಗಿ ಹೆಚ್‌.ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಕಸದ ಲಾರಿಗೆ ಬಲಿಯಾಗಿದ್ದಾಳೆ, ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅಸಮರ್ಪಕ ನಿರ್ವಹಣೆಯಲ್ಲದೆ ಮತ್ತಿನ್ನೇನು? ಎಂದು ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಮೊದಲು ಬಿಬಿಎಂಪಿಯನ್ನು ಸ್ವಚ್ಛಗೊಳಿಸಬೇಕಿದೆ ಎಂದು ಎಚ್ಚರಿಸಿದ್ದಾರೆ. ಸ್ವತಃ ಹೈಕೋರ್ಟ್ ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ.ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಬಿಬಿಎಂಪಿಯನ್ನು ಮೊದಲು ಸ್ವಚ್ಚಗೊಳಿಸಬೇಕಿದೆ. ಅಲ್ಲಿಂದಲೇ ಬೆಂಗಳೂರಿನ ಸ್ವಚ್ಚತೆ ಆರಂಭವಾಗಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

22/03/2022 01:10 pm

Cinque Terre

46.29 K

Cinque Terre

8

ಸಂಬಂಧಿತ ಸುದ್ದಿ