ಬೆಂಗಳೂರು : ಎರಡನೇ ಅವಧಿಗೆ ಉತ್ತರ ಪ್ರದೇಶದ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಯೋಗಿ ಆದಿತ್ಯನಾಥ್ ಅವರು 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಮಾ.25ರಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಸದ್ಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗಿದ್ದು, ಈ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕರು, ಕೇಂದ್ರ ಮಂತ್ರಿಗಳು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸದ್ಯ ಲಖ್ನೌದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
PublicNext
22/03/2022 05:52 pm