ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕೈ'ಗೆ ಮತ್ತೊಂದು ಶಾಕ್: ಕಾಶ್ಮೀರ ವಿಚಾರ ಮುಂದಿಟ್ಟು ಪಕ್ಷಕ್ಕೆ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಸೋಲು, ಜಿ23 ಬಂಡಾಯ ನಾಯಕರ ಆಗ್ರಹ, ದಿ ಕಾಶ್ಮೀರ ಫೈಲ್ಸ್ ಬಾಲಿವುಡ್ ಚಿತ್ರ ವಿಚಾರದಲ್ಲಿನ ಅಸಂಬದ್ದ ಹೇಳಿಕೆಗೆ ಕಾಂಗ್ರೆಸ್‌ಗೆ ಮುಳುವಾಗುತ್ತಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿರುವ ವಿಕ್ರಮಾದಿತ್ಯ ಸಿಂಗ್, "ಜಮ್ಮು ಮತ್ತು ಕಾಶ್ಮೀರ ಜನರ ಭಾವನೆಗಳನ್ನು, ಆಕಾಂಕ್ಷೆಗಳನ್ನು ಅರಿತುಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

22/03/2022 08:12 pm

Cinque Terre

92.24 K

Cinque Terre

11

ಸಂಬಂಧಿತ ಸುದ್ದಿ