ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಮುಂದೂಡಿರುವ ಸಂಬಂಧ ಬಿಜೆಪಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೆಂಡಾಮಂಡಲರಾಗಿದ್ದಾರೆ. ಅಷ್ಟೇ ಅಲ್ಲದೆ ಪಂಜಾಬ್ ವಿಧಾನಸಭಾ ಚುನಾವಣೆಯ ಗೆಲುವಿನ ಹುಮ್ಮಸ್ಸಿನಲ್ಲಿರುವ ಅವರು ಬಿಜೆಪಿಗೆ ಹೊಸ ಸವಾಲನ್ನು ಹಾಕಿದ್ದಾರೆ.
ದೆಹಲಿ ವಿಧಾನಸಭೆಯ ಹೊರಗೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, "ಎಂಸಿಡಿ ಚುನಾವಣೆಯನ್ನು ಈಗಲೇ ನಡೆಸಿ, ಅದರಲ್ಲಿ ಬಿಜೆಪಿ ಗೆದ್ದರೆ ನಾನು ರಾಜಕೀಯವನ್ನು ತೊರೆಯುತ್ತೇನೆ. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವೆಂದು ಕೊಚ್ಚಿಕೊಳ್ಳುತ್ತದೆ. ಆದರೆ ಸಣ್ಣ ಪಕ್ಷ ಹಾಗೂ ಸಣ್ಣ ಚುನಾವಣೆಗೆ ಬಿಜೆಪಿ ಹೆದರಿದೆ. ಹಾಗಾಗಿ ಚುನಾವಣೆಯನ್ನು ಮುಂದೂಡಿದೆ" ಎಂದು ವಾಗ್ದಾಳಿ ನಡೆಸಿದರು.
PublicNext
23/03/2022 05:26 pm