ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಜನ ಸಂಪದ್ಭರಿತರಾಗಿದ್ದಾರೆ. ಹೀಗಾಗಿ ಬೆಲೆ ಏರಿಕೆ ಬಗ್ಗೆ ಯಾರೂ ಪ್ರಶ್ನೆ ಮಾಡುತ್ತಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಪೂರಕ ಚರ್ಚೆ ಮಾಡಲು ಬಿಜೆಪಿಯವರ ಬಳಿ ಸರಕಿಲ್ಲ. ಅದಕ್ಕಾಗಿಯೇ ಅವರು ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದಿದ್ದಾರೆ. ಬಹುಶಃ ಈ ಕಾರಣಕ್ಕೆ ಅವರು ಪ್ರತಿಭಟನೆ ಮಾಡುತ್ತಿಲ್ಲ. ಈಗಲಾದರೂ ಎಲ್ಲರೂ ಎಚ್ಚೆತ್ತು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಿದೆ. ಜನರು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದೇನು ದುರಂತ ಕಾದಿದೆಯೊ ಗೊತ್ತಿಲ್ಲ. ಬೆಲೆ ಏರಿಕೆ ವಿಚಾರ ಜನರಿಗೆ ಬೇಡವಾಗಿದೆ. ನಮ್ಮದು ಕೀರಲು ದನಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಭಿವೃದ್ಧಿ ಪೂರಕ ಚರ್ಚೆ ಮಾಡುವುದು ಸರ್ಕಾರಕ್ಕೆ ಬೇಕಿಲ್ಲ. ಉತ್ತರ ಭಾರತದ ಚುನಾವಣಾ ವಿಚಾರವನ್ನು ಕರ್ನಾಟಕಕ್ಕೆ ಪರಿಚಯಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಮುಂದೆ ಏನೇನು ಆಗುತ್ತದೋ ನನಗಂತೂ ಗೊತ್ತಿಲ್ಲ ಎಂದರು.
PublicNext
23/03/2022 10:28 pm