ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ: ಸಚಿವ ಸೋಮಣ್ಣ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವ ಪ್ರಕರಣದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಸೋಮಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಬುಧವಾರ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ರಾಮಕೃಷ್ಣ ಎಂಬುವವರು ನ್ಯಾಯಾಲಯಕ್ಕೆ ವಿ. ಸೋಮಣ್ಣ ಅವರ ಆಸ್ತಿ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ಎಸಿಬಿ ತನಿಖೆ ನಡೆದು ಡಿವೈಎಸ್‌ಪಿ ಅವರು 'ಬಿ-ರಿಪೋರ್ಟ್' ವರದಿ ಸಲ್ಲಿಸಿದ್ದರು. ಆದರೆ 'ಬಿ- ರಿಪೋರ್ಟ್‌' ತಿರಸ್ಕರಿಸಿದ ನ್ಯಾಯಾಲಯ ವಿಚಾರಣೆ ಆರಂಭಿಸಲು ತೀರ್ಮಾನಿಸಿದೆ. ತಮ್ಮ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಾದ ನಂತರವೂ ಅವರು ಸಚಿವರಾಗಿ ಅವರು ಹೇಗೆ ಮುಂದುವರಿಯುತ್ತಾರೆ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Edited By : Nagaraj Tulugeri
PublicNext

PublicNext

24/03/2022 07:55 am

Cinque Terre

34.49 K

Cinque Terre

1

ಸಂಬಂಧಿತ ಸುದ್ದಿ