ಡೆಹ್ರಾಡೂನ್: ನನ್ನ ರಾಜಕೀಯ ಜೀವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಫೂರ್ತಿ. ಅವರಂತೆಯೇ ಉತ್ತರಾಖಂಡ್ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತೇನೆ ಎಂದು ಉತ್ತರಾಖಂಡ ನೂತನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಮಂಗಳವಾರ (ಮಾರ್ಚ್ 22) ತಮ್ಮ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರ ವಿಡಿಯೋ ಹಂಚಿಕೊಂಡ ಅವರು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ದೇವಭೂಮಿ ಉತ್ತರಾಖಂಡ ಮುಖ್ಯಮಂತ್ರಿಯಾಗಿ ನಾನು ಜನರ ಆಶೋತ್ತರಗಳಿಗೆ ಉತ್ತರದಾಯಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
PublicNext
24/03/2022 03:57 pm