ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಶಾಸಕಾಂಗ ನಾಯಕರಾಗಿ ಯೋಗಿ ಆಯ್ಕೆ

ಲಖನೌ: ಉತ್ತರ ಪ್ರದೇಶದ ಲಖನೌ ನಲ್ಲಿ ನಡೆದ ಬಿಜೆಪಿಯ ಶಾಸಕರು ಸಭೆಯಲ್ಲಿ, ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ನಾಳೆ ಯೋಗಿ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಾ.25 ರಂದು ರಾಜ್ಯ ರಾಜಧಾನಿ ಲಖನೌ ನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಇಕಾನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ. ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಇನ್ನಿತರ ಪ್ರಮುಖ ನಾಯಕರು ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

403 ವಿಧಾನಸಭೆ ಕ್ಷೇತ್ರಗಳ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ 255 ಮತ್ತು ಅದರ ಮಿತ್ರ ಪಕ್ಷಗಳು 18 ಕ್ಷೇತ್ರಗಳನ್ನು ಜಯಿಸಿದ್ದವು.

Edited By : Nirmala Aralikatti
PublicNext

PublicNext

24/03/2022 06:39 pm

Cinque Terre

35.83 K

Cinque Terre

20

ಸಂಬಂಧಿತ ಸುದ್ದಿ