ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2ನೇ ಅವಧಿಗೆ ಸಿಎಂ ಆಗಿ ಯೋಗಿ ಇಂದು ಪ್ರಮಾಣ ವಚನ

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಮುನ್ನಡೆಸಿದ ಯೋಗಿ ಆದಿತ್ಯನಾಥ್ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ಸಿಎಂ ಆಗಿ ಯೋಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಅದ್ದೂರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ಆಡಳಿತದ ಮುಖ್ಯಮಂತ್ರಿಗಳು, ಮುಖೇಶ್ ಅಂಬಾನಿ ಸೇರಿದಂತೆ ಹಲವು ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಭಾಗಿಯಾಗಲಿದ್ದಾರೆ.

Edited By : Vijay Kumar
PublicNext

PublicNext

25/03/2022 10:01 am

Cinque Terre

33.08 K

Cinque Terre

6

ಸಂಬಂಧಿತ ಸುದ್ದಿ