ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಸ್ವಾಮೀಜಿಗಳ ಉಡುಗೆ ಬಗ್ಗೆ ನಾನು ಅವಹೇಳನಕಾರಿಯಾಗಿ ಮಾತನಾಡಿಲ್ಲ. ರಾಜಕೀಯ ವಿರೋಧಿಗಳು ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಮಾಧ್ಯಮಗಳು ಕೂಡ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಯ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ' ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

25/03/2022 11:07 pm

Cinque Terre

59.05 K

Cinque Terre

20

ಸಂಬಂಧಿತ ಸುದ್ದಿ