ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ʻʻನನ್ನ ಮಗಳ ಹೆಸರಿನಲ್ಲಿ ನಕಲಿ ಸರ್ಟಿಫಿಕೆಟ್ ಪಡೆದಿಲ್ಲ” – ಎಂ.ಪಿ.ರೇಣುಕಾಚಾರ್ಯ ಸ್ಪಷ್ಟನೆ

ದಾವಣಗೆರೆ: ನನ್ನ ಮಗಳ ಹೆಸರಿನಲ್ಲಿ ನಕಲಿ ಸರ್ಟಿಫಿಕೆಟ್ ಪಡೆದಿಲ್ಲ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯನೋ. ನಾನು ಹೇಳೋದು ಅಷ್ಟೇ ಸತ್ಯ ಎಂದು ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಹೊನ್ನಾಳಿ ಪಟ್ಟಣದ ಹಿರೇಕಲ್ಮಠದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರೇಣುಕಾಚಾರ್ಯ ರ ಮಗಳು ಫೇಕ್ ಸರ್ಟಿಫಿಕೇಟ್ ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ಸ್ಪಷ್ಟೀಕರಣ ಕೇಳಿದ್ದಕ್ಕೆ ಉತ್ತರಿಸಿದ್ರು. ಹಾಗೆಯೇ ನಾನು ಬೂಟಾಟಿಕೆ‌ ಮಾಡಲು ಹೋಗುವುದಿಲ್ಲ. ಜಾತ್ಯಾತೀತ ವ್ಯಕ್ತಿ. ಯಾವುದೇ ಒಂದು ಧರ್ಮಕ್ಕೆ‌ ಸೇರಿದವನಲ್ಲ. ಎಲ್ಲರನ್ನೂ ಸಮಾನಾಗಿ ಕಾಣುವವನು ಅಂತಲೂ ಹೇಳಿದ್ರು.

Edited By : Manjunath H D
PublicNext

PublicNext

26/03/2022 01:46 pm

Cinque Terre

68.1 K

Cinque Terre

2

ಸಂಬಂಧಿತ ಸುದ್ದಿ