ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವ ವಿಧಾನಸಭೆ ಕ್ಷೇತ್ರದ ಸವಣೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಕಾರ್ಯ ಮತ್ತು ಪಾಲನಾ ಉಪವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಭಾರತಿ, ಹಾವೇರಿ ಜಿಲ್ಲಾಧಿಕಾರಿ ಡಾ. ಸಂಜಯ ಶೆಟ್ಟೆಣ್ಣವರ್, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ ರೋಷನ್ ಮತ್ತು ಇತರರು ಉಪಸ್ಥಿತರಿದ್ದರು.
PublicNext
26/03/2022 07:31 pm