ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ದೇಶಾದ್ಯಂತ ಮೂರು ಹಂತಗಳಲ್ಲಿ ರ್‍ಯಾಲಿ

ನವದೆಹಲಿ: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಶನಿವಾರ ಮೂರು ಹಂತದ ಪ್ರತಿಭಟನಾ ಅಭಿಯಾನವನ್ನು ಘೋಷಿಸಿದ್ದು, "ಮೆಹಂಗೈ-ಮುಕ್ತ್ ಭಾರತ್ ಅಭಿಯಾನ್"ದ ಅಡಿಯಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 7 ರವರೆಗೆ ದೇಶಾದ್ಯಂತ ರ್‍ಯಾಲಿಗಳು ಮತ್ತು ಮೆರವಣಿಗೆಗಳನ್ನು ಆಯೋಜಿಸಿದೆ.

ಶನಿವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆಯಲ್ಲಿ ಆಂದೋಲನವನ್ನು ಪ್ರಾರಂಭಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಮೊದಲ ಹಂತದ ಅಭಿಯಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾಮಾನ್ಯ ಜನರು ಮಾರ್ಚ್ 31 ರಂದು ತಮ್ಮ ಮನೆಗಳ ಹೊರಗೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಜನರು ಎಲ್‌ಪಿಜಿ ಸಿಲಿಂಡರ್‌ಗಳಿಗೆ ಹಾರ ಹಾಕಿ, ಡ್ರಮ್ ಬಾರಿಸುತ್ತಾರೆ. ಆ ಮೂಲಕ ಹಣದುಬ್ಬರದ ಸಮಸ್ಯೆಯನ್ನು ಎತ್ತಿ ತೋರಿಸುತ್ತಾರೆ. ಅಂತೆಯೇ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದುಸ್ತರ ಹೆಚ್ಚಳದ ವಿರುದ್ಧ ಕಿವುಡ ಬಿಜೆಪಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತಾರೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

27/03/2022 01:53 pm

Cinque Terre

72.57 K

Cinque Terre

10