ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಲೆ ಬೋಳಿಸಿಕೊಳ್ತೀನಿ ಎಂದಿದ್ದೆ, ಅಂದು ತಲೆ ತುಂಬ ಕೂದಲಿತ್ತು ಇಂದು ಇಲ್ಲ: ಎಚ್​ಡಿಕೆ ವ್ಯಂಗ್ಯ

ಕೋಲಾರ: ಎತ್ತಿನಹೊಳೆ ಯೋಜನೆಯ ಭಾಗವಾಗಿ 2014ರಲ್ಲಿ ಅಡಿಪಾಯ ಹಾಕಲಾಗಿತ್ತು. ಆದರೆ ಇದುವರೆಗೂ ನೀರು ಕೊಟ್ಟಿಲ್ಲ‌. ಇನ್ನೂ 50 ವರ್ಷ ಆದ್ರೂ ರಾಷ್ಟ್ರೀಯ ಪಕ್ಷಗಳಿಂದ ನೀರು ಕೊಡಲು ಆಗಿಲ್ಲ‌. ಅಂದೆ ಒಂದು ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ಳುವೆ ಎಂದಿದ್ದೆ. ಅಂದು ತಲೆ ತುಂಬ ಕೂದಲಿತ್ತು, ಇಂದು ಇಲ್ಲವಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಆದ್ರೂ ರಾಜ್ಯದ ಇವತ್ತಿನ ಪರಿಸ್ಥಿತಿಗೆ ಅವರೇ ಕಾರಣ. ಮೈತ್ರಿ ಸರ್ಕಾರದ ಉಳಿವಿಗಾಗಿ ನಮಗೆ ಇಷ್ಟವಿಲ್ಲದಿದ್ರು ಪ್ರಯತ್ನ ಪಟ್ಟೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡಿದ್ದೇವೆ. 2004ರಲ್ಲಿ ಕಾಂಗ್ರೆಸ್​ಗೆ ಬೆಂಬಲ ಕೊಟ್ಟಿದ್ವಿ. ಕಳೆದ ವರ್ಷ ಬಿಜೆಪಿಗೆ 104 ಸ್ಥಾನ ಪಡೆಯಲು ಸಿದ್ದರಾಮಯ್ಯ ಕಾರಣ. ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂಬ ಹೇಳಿಕೆಯಿಂದ ಆ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಯ್ತು ಎಂದರು.

ಎರಡು ರಾಷ್ಟ್ರೀಯ ಪಕ್ಷಗಳು ಸಮಾಜದ ಸಾಮರಸ್ಯವನ್ನ ಹಾಳು ಮಾಡುತ್ತಿವೆ. ಅವುಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದರು.

Edited By : Vijay Kumar
PublicNext

PublicNext

27/03/2022 03:53 pm

Cinque Terre

54.45 K

Cinque Terre

3

ಸಂಬಂಧಿತ ಸುದ್ದಿ