ತುಮಕೂರು: ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಏಪ್ರಿಲ್ 1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.
ಏಪ್ರಿಲ್ 1ರಂದು ಬೆಳಗ್ಗೆ 10.30ಕ್ಕೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಸಚಿವರು, ಶಾಸಕರು ಕೂಡ ಭಾಗವಹಿಸಲಿದ್ದಾರೆ.
PublicNext
27/03/2022 04:27 pm