ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರಿ ಭದ್ರತೆ ನಡುವೆಯೂ ಬಿಹಾರ ಸಿಎಂ ನಿತೀಶ್ ಕುಮಾರ್‌ ಮೇಲೆ ಹಲ್ಲೆ.!

ಪಾಟ್ನಾ: ಭಾರಿ ಭದ್ರತೆ ನಡುವೆಯೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಅಪರಿಚಿತನೊಬ್ಬ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ.

ಭಕ್ತಿಯಾರ್‌ಪುರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳಿಗೆ ನಿತೀಶ್ ಕುಮಾರ್ ಅವರು ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. 20ರಿಂದ 30 ವರ್ಷದೊಳಗಿನ ಯುವಕನೊಬ್ಬ ನಿತೀಶ್ ಅವರ ಹಿಂಬದಿಯಿಂದ ಬಂದು ಅವರೆದುರು ನಿಂತುಕೊಳ್ಳುತ್ತಿರುವ ದೃಶ್ಯವು ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ದಾಖಲಾಗಿದೆ. ತಕ್ಷಣವೇ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿಗಳ ಭದ್ರತಾ ಸಿಬ್ಬಂದಿ, ವ್ಯಕ್ತಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದರು.

Edited By : Vijay Kumar
PublicNext

PublicNext

28/03/2022 09:04 am

Cinque Terre

97.88 K

Cinque Terre

6

ಸಂಬಂಧಿತ ಸುದ್ದಿ