ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನಸಭೆಯಲ್ಲಿ ಶಾಸಕರ ಫೈಟ್ : ಬಿಜೆಪಿ ಐವರು ಶಾಸಕರು ಸಸ್ಪೆಂಡ್

ಕೋಲ್ಕತ್ತ: ದೀದಿ ನಾಡಲ್ಲಿ ಪರಿಸ್ಥಿತಿ ಸರಿಯಿಲ್ಲ ಸಭೆಯಲ್ಲಿ ಶಾಸಕರು ಬಡಿದಾಡಿಕೊಂಡಿರುವುದೇ ಇದಕ್ಕೆ ಸಾಕ್ಷಿ.ಇತ್ತೀಚೆಗೆ ಬಿರ್ ಭೂಮ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆಯಲ್ಲಿಯೇ ಭಾರತೀಯ ಜನತಾ ಪಕ್ಷ ಹಾಗೂ ಆಡಳಿತಾರೂಡ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕರ ನಡುವೆ ಮಾರಾಮಾರಿ ನಡೆದಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ಶಾಸಕರು ಆಗ್ರಹಿಸಿದರು. ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷಗಳ ಶಾಸಕರ ನಡುವಣ ವಾಕ್ಸಮರ ತಾರಕಕ್ಕೇರಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆ ಬಳಿಕ ಸುವೇಂದು ಅಧಿಕಾರಿ ಸೇರಿದಂತೆ ಐವರು ಬಿಜೆಪಿ ಶಾಸಕರನ್ನು ಮುಂದಿನ ಆದೇಶದ ವರೆಗೆ ಅಮಾನತುಗೊಳಿಸಲಾಗಿದೆ.

Edited By : Nirmala Aralikatti
PublicNext

PublicNext

28/03/2022 02:48 pm

Cinque Terre

121.82 K

Cinque Terre

18

ಸಂಬಂಧಿತ ಸುದ್ದಿ