ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋವಾದ ಮುಖ್ಯಮಂತ್ರಿ ಆಗಿ ಪ್ರಮೋದ್ ಸಾವಂತ್ ಪ್ರಮಾಣವಚನ ಕಾರ್ಯಕ್ರಮ : ಪ್ರಧಾನಿ - ಮುಖ್ಯಮಂತ್ರಿ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಉಪಸ್ಥಿತರುದ್ದರು.

ವೇದಿಕೆಯಲ್ಲೆ ಪ್ರಧಾನಿಯವರಿಗೆ ನಮಸ್ಕರಿಸಿದ ಮುಖ್ಯಮಂತ್ರಿ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಗಣ್ಯ ನಾಯಕರ ಜೊತೆ ರಾಜ್ಯದ ಬಗ್ಗೆ ಸಮಾಲೋಚನೆ ನಡೆಸಿದರು. ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಜನ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

28/03/2022 03:55 pm

Cinque Terre

23.39 K

Cinque Terre

1

ಸಂಬಂಧಿತ ಸುದ್ದಿ