ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಮಾಜಿ ಸಿಎಂ ಆಗಿದ್ದವರು ಅರಿತು ಹೇಳಿಕೆ ಕೊಡಬೇಕಿತ್ತು. ಸ್ವಾಮೀಜಿಗಳು ಧಾರ್ಮಿಕ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಅಂತವರ ಮನಸ್ಸಿಗೆ ನೋವುಂಟು ಮಾಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ ಎಂದಿದ್ದಾರೆ.
ಎಲ್ಲ ಸ್ವಾಮೀಜಿಗಳು ಕೂಡ ಸಿದ್ದರಾಮಯ್ಯ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆ ಕೊಡುವುದು ಸರಿಯಲ್ಲ. ಯಾರೇ ಆಗಲಿ ಶಾಂತಿ ಕದಡುವ ಕೆಲಸ ಮಾಡಬಾರದು. ಸ್ವಾಮೀಜಿಗಳು ಕೇಸರಿ ವಸ್ತ್ರ ಧರಿಸಿದರೆ ತಪ್ಪೇನು? ಎಂದು ಪ್ರಶ್ನಿಸಿದ್ದಾರೆ.
ಧಾರ್ಮಿಕ ಕ್ಷೇತ್ರದಲ್ಲಿ ಅನ್ಯ ಧರ್ಮೀಯರಿಂದ ವ್ಯಾಪಾರ ಸಂಬಂಧ ಈ ಕಾಯ್ದೆ ಮಾಡಿದ್ದು ನಾವಲ್ಲ. ಕಾಂಗ್ರೆಸ್ ಅವಧಿಯಲ್ಲೇ ಈ ಕಾಯ್ದೆ ಮಾಡಲಾಗಿದೆ. ಅಂಗೀಕಾರ ಪಡೆದು ಕಾನೂನು ತಿದ್ದುಪಡಿ ಮಾಡಿದ್ದಾರೆ. ಪಾಲನೆ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ ಅಷ್ಟೇ. ಚುನಾವಣೆಗೂ ಇದಕ್ಕೂ ಸಂಬಂಧ ಇಲ್ಲ. ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಯಾವಾಗ ಚುನಾವಣೆ ಬಂದರೂ ಎದುರಿಸಲು ನಾವು ತಯಾರಿದ್ದೇವೆ. ಡಿಸೆಂಬರ್‌ನಲ್ಲಿ ಚುನಾವಣೆ ನಡೆಸುವ ಬಗ್ಗೆ ಪ್ರಸ್ತಾವನೆ ಇಲ್ಲ. ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
PublicNext
28/03/2022 04:12 pm