ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಪಿ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಅಖಿಲೇಶ್ ಜೊತೆ ಸಿಎಂ ಮಾತು

ಲಖನೌ: ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಸಿಎಂ ಪಟ್ಟ ಅಲಂಕರಿಸಿದ್ದಾರೆ. ಇಂದು ಉತ್ತರ ಪ್ರದೇಶದ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ರಾಮತಿ ಶಾಸ್ತ್ರಿ ಪ್ರಮಾಣವಚನ ಬೋಧಿಸಿದರು. ಈ ವೇಳೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಸಮಾಜವಾದಿ ಪಕ್ಷ ಅಧಿಕೃತವಾಗಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದ್ದು, ಅಖಿಲೇಶ್ ಯಾದವ್ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆಗೆ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಿಎಂ ಯೋಗಿ, ಅಖಿಲೇಶ್ ಯಾದವ್ ಅವರಿಗೆ ಹಸ್ತಾಲಾಘವ ನೀಡಿದ ವಿಡಿಯೋ ವೈರಲ್ ಆಗಿದೆ.

ಈ ವೇಳೆ ಮಾತನಾಡಿರುವ ಯೋಗಿ ಆದಿತ್ಯನಾಥ್, ನೂತನ ಶಾಸಕರಾಗಿ ಆಯ್ಕೆಯಾಗಿರುವ ಎಲ್ಲರಿಗೂ ಸ್ವಾಗತ. ಸದಸ್ಯರು ಸದನದಲ್ಲಿ ಶಿಸ್ತು ಮತ್ತು ಸಭ್ಯತೆ ಕಾಯ್ದುಕೊಂಡು ಹೋಗುವ ಭರವಸೆ ಇದೆ ಎಂದರು. ಯುಪಿ ಚುನಾವಣೆಯಲ್ಲಿ ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 273 ಸ್ಥಾನಗಳಲ್ಲಿ ಗೆದ್ದಿದ್ದು, ಸಮಾಜವಾದಿ ಪಕ್ಷ 111 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ.

Edited By : Nirmala Aralikatti
PublicNext

PublicNext

28/03/2022 09:10 pm

Cinque Terre

71.31 K

Cinque Terre

4

ಸಂಬಂಧಿತ ಸುದ್ದಿ