ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸ ಸತತ ಎರಡನೇ ಬಾರಿ ರದ್ದಾಗಿದೆ. ಅವರು ವಿವಿಧ ಕಾರ್ಯಕ್ರಮ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಏಪ್ರಿಲ್ 5ರಂದು ಕರ್ನಾಟಕಕ್ಕೆ ಆಗಮಿಸಬೇಕಿತ್ತು. ಆದರೆ ಕಾರ್ಯಕ್ರಮ ರದ್ದಾಗಿದೆ. ಈ ಕುರಿತು ಸಿಎಂ ಕಚೇರಿಗೆ ಪ್ರಧಾನಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.
ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೋದಿ ಪ್ರವಾಸ ಕುರಿತು ಮಾಹಿತಿ ಬಹಿರಂಗ ಪಡಿಸಿದ್ದರು. ಏಪ್ರಿಲ್ 5ರಂದು ಪ್ರಧಾನಿ ಭೇಟಿ ನೀಡುವ ಸಾಧ್ಯತೆ ಇದೆ ಎಂದಿದ್ದರು. ಇದೇ ವೇಳೆ ಏಪ್ರಿಲ್ 1ರಂದು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದರು. ಇದರಲ್ಲಿ ಪ್ರಧಾನಿ ಮೋದಿ ಪ್ರವಾಸ ರದ್ದಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.
PublicNext
29/03/2022 11:53 am